ಮಡಿಕೇರಿ, ನ.12: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ತಾ. 14 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂಕಾರ್ಯಪ್ಪ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎ.ಪಿ.ಧನಂಜಯ, ಕೊಡಗು ಜಿಲ್ಲಾ ಪ್ರಾಂಶುಪಾಲರದ ಸಂಘದ ಕಾರ್ಯದರ್ಶಿ ಮಹಾಲಿಂಗಯ್ಯ, ಖಜಾಂಚಿ ಪುರುಷೋತ್ತಮ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ ಇತರರು ಪಾಲ್ಗೊಳ್ಳಲಿದ್ದಾರೆ.