ಕರಿಕೆ, ನ. 13: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿ ಸಂತ ಮೈಕಲರ ಶಾಲೆಯಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಿಕೋತ್ಸವದಲ್ಲಿ ಇಲ್ಲಿನ ಕರಿಕೆ ಕಾಲೋನಿ ಸ.ಹಿ.ಪ್ರಾ. ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಭಾವನಾ ಎಂ.ಪಿ. ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದಾಳೆ.