ಮಡಿಕೇರಿ, ನ. 13: ಸಮನ್ವಯ ವೇದಿಕೆ ವತಿಯಿಂದ ತಾ. 17 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಾಲಭವನದಲ್ಲಿ ರಾಷ್ಟ್ರ ಮತ್ತು ರಾಷ್ಟ್ರೀಯತೆ ಕುರಿತು ಉಪನ್ಯಾಸ ಏರ್ಪಡಿಸಲಾಗಿದೆ. ಈ ವೇಳೆ ವಕೀಲ ಹಾಗೂ ಸಾಹಿತಿ ಕೆ.ಪಿ. ಬಾಲಸುಬ್ರಮಣ್ಯ ಅಧ್ಯಕ್ಷತೆಯೊಂದಿಗೆ ಬೆಂಗಳೂರಿನ ಡಾ. ಕೆ. ಪ್ರಕಾಶ್ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.