ಮಡಿಕೇರಿ, ನ. 13: ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರಿನ ಬ್ಯಾಂಕಿಂಗ್ ಓಂಬುಡ್ಸ್ಮನ್ ವಿಭಾಗದ ಕಾರ್ಯಾಗಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಿತು.

ಬ್ಯಾಂಕಿಂಗ್ ಓಂಬುಡ್ಸ್ಮನ್ ಬಗ್ಗೆ ಜಾಗೃತಿ ಮೂಡಿಸಲು ಬ್ಯಾಂಕಿಂಗ್ ಓಂಬುಡ್ಸ್ಮನ್ ಸ್ಕೀಮ್ 2006, ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗಾಗಿ ಓಂಬುಡ್ಸ್ಮನ್ ಯೋಜನೆ 2018, ಮತ್ತು ಡಿಜಿಟಲ್ ವಹಿವಾಟುಗಳಿಗಾಗಿ ಓಂಬುಡ್ಸ್ಮನ್ ಯೋಜನೆ 2019 ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಮುಂಬೈನ ಆರ್.ಬಿ.ಐ.ನ ಮುಖ್ಯ ಪ್ರಧಾನ ವ್ಯವಸ್ಥಾಪಕರು ಹಾಗೂ ಓಂಬುಡ್ಸ್ಮನ್, ಕರ್ನಾಟಕ ಮತ್ತು ಓಂಬುಡ್ಸ್ಮನ್, ತಮಿಳುನಾಡು ಹಾಗೂ ಬ್ಯಾಂಕಿನ ಇತರ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.