ಮಡಿಕೇರಿ, ನ. 13: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದವರು ಡಿಸೆಂಬರ್ ಮಾಹೆಯಲ್ಲಿ ನಡೆಸಲಿರುವ ಕಾಲೇಜು ಉಪನ್ಯಾಸಕರ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆ ಹಾಗೂ ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ ಪರೀಕ್ಷೆಗಾಗಿ ಮತ್ತು ಮುಂದೆ ನಡೆಯಲಿರುವ ರಾಜ್ಯಮಟ್ಟದ ಉಪನ್ಯಾಸಕರ ಅರ್ಹತಾ ಪರೀಕ್ಷೆ(ಕೆ-ಸೆಟ್)ಗೆ ತರಬೇತಿ ಆಯೋಜಿಸಿದೆ.

ಆಸಕ್ತರು ತಾ. 14 ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಬಿ. ರಮೇಶ್ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944, 9964760090 ನ್ನು ಸಂಪರ್ಕಿಸಬಹುದು.