ಬಾಳೆಲೆ, ನ. 13: ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರತಿಭಾ ಪ್ರೌಢಶಾಲೆ ಬಾಳೆಲೆಯ 10ನೇ ತರಗತಿಯ ವಿದ್ಯಾರ್ಥಿ ಸಿ.ವಿ. ಅನ್ವಿತ್‍ಕುಮಾರ್ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ಬಾಳೆಲೆ ಗಣೇಶ ದೇವಸ್ಥಾನದ ಅರ್ಚಕರಾದ ವಿಷ್ಣುಮೂರ್ತಿ ಮತ್ತು ಚಂದ್ರಕಲಾ ದಂಪತಿಯ ಪುತ್ರ ಹಾಗೂ ಸಂಗೀತ ಶಿಕ್ಷಕಿ ವತ್ಸಲಾ ನಾರಾಯಣ್ ಅವರ ಶಿಷ್ಯ.