ಕುಶಾಲನಗರ, ನ. 13: ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಗೇಮ್ಸ್-2019 ರ 50 ವಯೋಮಾನ ಮೇಲ್ಪಟ್ಟ ವಿಭಾಗದಲ್ಲಿ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಕುಶಾಲನಗರದ ಮಾಜಿ ಸೈನಿಕ ಅಮೆ ಜನಾರ್ಧನ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ 5000 ಮೀ. ಮತ್ತು 1500 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಅಮೆ ಜನಾರ್ಧನ 2020 ರ ಫೆಬ್ರವರಿ ತಿಂಗಳಲ್ಲಿ ಗುಜರಾತಿನ ವಡೋದರದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.ಕುಶಾಲನಗರ: ಸ್ಥಳೀಯ ವಿವೇಕಾನಂದ ಪಿ.ಯು. ಕಾಲೇಜಿನ ದ್ವಿತೀಯ ಪಿ.ಯು. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಿಯಾಂಕ ನಾರಾಯಣ್ ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಚಿಕ್ಕಮಗಳೂರಿನ ಎಂಇಎಸ್ ಕಾಲೇಜಿನಲ್ಲಿ ತಾ. 8 ಮತ್ತು 9 ರಂದು ನಡೆದ ರಾಜ್ಯಮಟ್ಟದ ಪಿ.ಯು. ವಿಭಾಗದ ಸ್ಪರ್ಧೆಯಲ್ಲಿ ಪಾಲ್ಗೊಂಡು ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಕಾಲೇಜುಗಳಿಂದ 150ಕ್ಕೂ ಹೆಚ್ವು ಸ್ಪರ್ಧಿಗಳು ಭಾಗವಹಿಸಿದ್ದರು. ಪ್ರಿಯಾಂಕ ಕುಶಾಲನಗರ ಕೆನರಾ ಬ್ಯಾಂಕ್ ಅಧಿಕಾರಿ ನಾರಾಯಣ್ ಅವರ ಪುತ್ರಿ.