*ಗೋಣಿಕೊಪ್ಪಲು, ನ. 13: ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ವೀರಾಜಪೇಟೆ ವ್ಯಾಪ್ತಿಯ ಆರ್ಜಿ ಗ್ರಾಮದಲ್ಲಿ ನಿರ್ಮಿಸಿದ ವಾಲ್ಮೀಕಿ ಭವನ ನಿರುಪಯುಕ್ತವಾಗಿದೆ ಎಂದು ಪತ್ರಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಶಾಸಕ ಕೆ.ಜಿ. ಬೋಪಯ್ಯ ವಾಲ್ಮೀಕಿ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಸ್ಥಳೀಯ ಗ್ರಾಮ ಪಂಚಾಯಿತಿ ಅಥವಾ ತಾಲೂಕು ಕಂದಾಯ ಇಲಾಖೆಗೆ ಇದರ ನಿರ್ವಹಣೆಯ ಹೊಣೆ ಹೊತ್ತುಕೊಳ್ಳುವಂತೆ ಸೂಚಿಸಿದರು. ಈ ಸಂದರ್ಭ ಜಿ.ಪಂ. ಸದಸ್ಯರುಗಳಾದ ಅಚ್ಚಪಂಡ ಮಹೇಶ್, ಅಪ್ಪಡೇರಂಡ ಭವ್ಯ, ತಾ.ಪಂ. ಸದಸ್ಯ ಬಿ.ಎಂ. ಗಣೇಶ್, ಗ್ರಾ.ಪಂ. ಉಪಾಧ್ಯಕ್ಷ ಗಿರಿ, ಸದಸ್ಯರುಗಳಾದ ಉದಯ, ಶ್ರೀಜಾ, ಆರ್ಜಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಣಿ ಸೇರಿದಂತೆ ಹಲವರು ಹಾಜರಿದ್ದರು.