ಮಡಿಕೇರಿ, ನ. 14: ಬೆಂಗಳೂರಿನಲ್ಲಿ ಇತ್ತೀಚೆಗೆ ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್‍ನ ವತಿಯಿಂದ ಆಯೋಜಿಸಲಾಗಿದ್ದ ಅಮರ ಸುಳ್ಯ ಸಮರ -1837 ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಜಿಲ್ಲೆಯ ಇಬ್ಬರನ್ನು ಸನ್ಮಾನಿಸಲಾಯಿತು. ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾಗಿದ್ದ ಕೊಡಗಿನ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಸ್ಮಾರಕ ನಿರ್ಮಾಣಕ್ಕಾಗಿ ಶ್ರಮಿಸಿದ್ದ ಹಾಗೂ ಅದೇ ಕುಟುಂಬದವರಾದ ಗುಡ್ಡೆಮನೆ ರಮೇಶ್ ಮತ್ತು ಇದೇ ಕುಟುಂಬದಿಂದ ಪ್ರಸ್ತುತ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ವಿವಾಹವಾಗಿರುವ ಡಾಟಿ ಸದಾನಂದ ಗೌಡ ಅವರನ್ನು ಸನ್ಮಾನಿಸಲಾಯಿತು.

ಆದಿಚುಂಚನಗಿರಿ ಮಠದ ನಿರ್ಮಲಾನಂದಸ್ವಾಮೀಜಿ ಸನ್ಮಾನ ನೆರವೇರಿಸಿದರು. ಈ ಸಂದರ್ಭ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ ರೆಡ್ಡಿ, ಸಚಿವ ಆರ್. ಅಶೋಕ್, ಸಂಸದರಾದ ಶೋಭಾ ಕರಂದ್ಲಾಜೆ, ಜಿ.ಸಿ. ಚಂದ್ರಶೇಖರ್ ಹಾಜರಿದ್ದರು.