ಕುಶಾಲನಗರ, ನ. 15: ಶ್ರೀ ಗಣಪತಿ ದೇವಸ್ಥಾನ ವಾರ್ಷಿಕೋತ್ಸವ ಅಂಗವಾಗಿ ತಾ. 16 ರಂದು (ಇಂದು) ರಥೋತ್ಸವ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಅಭಿಜಿನ್ ಲಗ್ನದಲ್ಲಿ ರಥೋತ್ಸವ ನಡೆಯುವದು. ಜಾತ್ರಾ ಅಂಗವಾಗಿ ದೇವಾಲಯದಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿ ಪೂಜಾ ವಿಧಿವಿಧಾನಗಳು ಜರುಗಿದವು. ರಥೋತ್ಸವದ ನಂತರ ಭಕ್ತಾದಿಗಳಿಗೆ ಮಾರುಕಟ್ಟೆ ರಸ್ತೆಯ ಗಾಯತ್ರಿ ಕಲ್ಯಾಣ ಮಂಟಪ ಆವರಣದಲ್ಲಿ ಅನ್ನಸಂತರ್ಪಣೆ ನಡೆಯಲಿದೆ.