ಸಂಪಾಜೆ, ನ. 15: ಕೊಡಗು ಸಂಪಾಜೆ ಗ್ರಾಮ ಪಂಚಾಯಿತಿನ ಗ್ರಾಮ ಮಟ್ಟದ ಕೆ.ಡಿ.ಪಿ. ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಚೆದ್ಕಾರ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ರಸ್ತೆಯು ವಿಪರೀತ ಮಳೆಯಿಂದ ಹಾನಿಯಾಗಿದ್ದು, ರಸ್ತೆಯನ್ನು ದುರಸ್ತಿ ಮಾಡಲು ಅನುದಾನ ಪಡೆಯಲು ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸ ಲಾಯಿತು ತ್ಯಾಜ್ಯ ವಿಲೇವಾರಿ ಮತ್ತು ಸಾರ್ವಜನಿಕ ಸ್ಮಶಾನಕ್ಕೆ ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಜಂಟಿಯಾಗಿ ಸ್ಥಳ ಗುರುತಿಸಲು ತೀರ್ಮಾನಿಸಲಾಯಿತು, ಅರಣ್ಯ ಇಲಾಖೆ ಅಧಿಕಾರಿ ಮಾಹಿತಿ ನೀಡಿ ಕಾಡಾನೆ ಹಾವಳಿ ಮತ್ತು ಮಂಗಗಳ ಹಾವಳಿಯನ್ನು ತಡೆಯಲು ಇಲಾಖೆ ಮುಂದಿನ ದಿನಗಳಲ್ಲಿ ಆನೆ ಕಂದಕ ಮತ್ತು ಸೋಲಾರ್ ಬೇಲಿ ಅಳವಡಿಸುವ ಯೋಜನೆಯ ಬಗ್ಗೆ ವಿವರಿಸಿದರು, ಚೆಸ್ಕಾಂ ಇಲಾಖೆ ಅಧಿಕಾರಿ ಮಾಹಿತಿ ನೀಡಿ ಸೌಭಾಗ್ಯ ಯೋಜನೆಯಲ್ಲಿ ಗ್ರಾಮದ ಎಲ್ಲಾ ಮನೆಗೆ ಶೀಘ್ರದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವದೆಂದು ಮಾಹಿತಿ ನೀಡಿದರು.

ಆರೋಗ್ಯ ಕೇಂದ್ರದಲ್ಲಿ 2್ಠ47 ಸೇವೆ ನೀಡಲು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಮನವಿ ಮಾಡಲಾಯಿತು, ಪೊಲೀಸ್ ಇಲಾಖಾಧಿಕಾರಿಯವರು ಮಾಹಿತಿ ನೀಡಿ ಸಂಪಾಜೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ, ಕಳ್ಳಭಟ್ಟಿ, ಗಾಂಜಾ ಹಾವಳಿ ಕಂಡು ಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡುವಂತೆ ಸಭೆಯಲ್ಲಿ ತಿಳಿಸಿದರು. ಗೋವುಗಳಿಗೆ ಉಚಿತ ಜೀವ ವಿಮಾ ಯೋಜನೆ ಬಗ್ಗೆ ಪಶು ವೈದ್ಯಾಧಿಕಾರಿ ಮಾಹಿತಿ ನೀಡಿ ಯೋಜನೆಯ ಸದುಪಯೋಗವನ್ನು ಪಡೆಯುವಂತೆ ವಿನಂತಿ ಮಾಡಿದರು.

ಕಾವೇರಿ ಗ್ರಾಮೀಣ ಬ್ಯಾಂಕಿನ ಅಧಿಕಾರಿಗಳು ಕೇಂದ್ರ ಸರಕಾರದ ವಿವಿಧ ವಿಮಾ ಯೋಜನೆಗಳಾದ ಜನ ಧನ್ ಯೋಜನೆ, ಅಟಲ್ ಪಿಂಚಣಿ ಯೋಜನೆ, ಜೀವನ್ ಸುರಕ್ಷಾ ಯೋಜನೆ, ಜೀವನ್ ಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ ನೀಡಿ ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆಯುವಂತೆ ಕೋರಿದರು. ಸಭೆಯಲ್ಲಿ ವಿವಿಧ ಇಲಾಖೆಗಳಾದ ತೋಟಗಾರಿಕೆ, ಶಿಕ್ಷಣಾ, ಗ್ರಂಥಾಲಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ , ಕರ್ನಾಟಕ ಗ್ರಾಮೀಣ ಬ್ಯಾಂಕ್‍ನ ಅಧಿಕಾರಿಗಳು ಪಾಲ್ಗೊಂಡು ತಮ್ಮ ಇಲಾಖೆ ಸಂಬಂಧಪಟ್ಟಂತೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೋಡೆಲ್ ಅಧಿಕಾರಿಗಳಾದ ತೋಟಗಾರಿಕೆ ಅಧಿಕಾರಿ ಡಾ. ವಿಜೇಶ್, ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ , ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಪಂಚಾಯತ್‍ನ ಚುನಾಯಿತ ಪ್ರತಿನಿಧಿಗಳು, ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಸ್ವಾಗತಿಸಿ, ವಂದಿಸಿದರು ಅಧಿಕಾರಿಗಳು ಕೇಂದ್ರ ಸರಕಾರದ ವಿವಿಧ ವಿಮಾ ಯೋಜನೆಗಳಾದ ಜನ ಧನ್ ಯೋಜನೆ, ಅಟಲ್ ಪಿಂಚಣಿ ಯೋಜನೆ, ಜೀವನ್ ಸುರಕ್ಷಾ ಯೋಜನೆ, ಜೀವನ್ ಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ ನೀಡಿ ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆಯುವಂತೆ ಕೋರಿದರು. ಸಭೆಯಲ್ಲಿ ವಿವಿಧ ಇಲಾಖೆಗಳಾದ ತೋಟಗಾರಿಕೆ, ಶಿಕ್ಷಣಾ, ಗ್ರಂಥಾಲಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ , ಕರ್ನಾಟಕ ಗ್ರಾಮೀಣ ಬ್ಯಾಂಕ್‍ನ ಅಧಿಕಾರಿಗಳು ಪಾಲ್ಗೊಂಡು ತಮ್ಮ ಇಲಾಖೆ ಸಂಬಂಧಪಟ್ಟಂತೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೋಡೆಲ್ ಅಧಿಕಾರಿಗಳಾದ ತೋಟಗಾರಿಕೆ ಅಧಿಕಾರಿ ಡಾ. ವಿಜೇಶ್, ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ , ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಪಂಚಾಯತ್‍ನ ಚುನಾಯಿತ ಪ್ರತಿನಿಧಿಗಳು, ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಸ್ವಾಗತಿಸಿ, ವಂದಿಸಿದರು