ಮಡಿಕೇರಿ, ನ. 15: ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ತಾ. 17 ರಂದು ಪೂರ್ವಾಹ್ನ 9 ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾ ಕೂಟದ ಉದ್ಘಾಟನೆಯನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ನೆರವೇರಿ ಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ಅಧ್ಯಕ್ಷ ಪಿ.ಜಿ. ಚೆನಿಯಾ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಹಾಗೂ ಇನ್ನಿತರ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.