ಕುಶಾಲನಗರ, ನ. 14: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರಪೇಟೆ ತಾಲೂಕು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರಿಗೆ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸರಕಾರಿ ಪಪೂ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಬಾರ ತಾಲೂಕು ಶಿಕ್ಷಣಾಧಿಕಾರಿ ಎಂ.ವಿ. ಮಂಜೇಶ್ ಉದ್ಘಾಟಿಸಿದರು. ಶಿಕ್ಷಕರಿಗೆ ಸಂಗೀತ, ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ, ಅಶುಭಾಷಣ ಸ್ಪರ್ಧೆ ಮತ್ತಿತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕøತ ಸುರೇಶ್ ಮರಗಾಲ ಅವರನ್ನು ಈ ಸಂದರ್ಭ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ್, ತಾಲೂಕು ಘಟಕದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ಸಂಘದ ಪ್ರಮುಖರಾದ ಡಾ. ಸದಾಶಿವಯ್ಯ ಪಲ್ಲೇದ್, ಟಿ.ಜಿ. ಪ್ರೇಮಕುಮಾರ್ ಮತ್ತಿತರರು ಇದ್ದರು.