ಮಡಿಕೇರಿ, ನ. 15 : ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಭ್ರಷ್ಟಾಚಾರ ನಿಗ್ರಹ ದಳ ಮಡಿಕೇರಿ ಪೊಲೀಸ್ ಠಾಣಾ ವತಿಯಿಂದ ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದೆ.

ವಿವರ ಇಂತಿದೆ. : ತಾ. 16 ರಂದು (ಇಂದು) ಬೆಳಿಗ್ಗೆ 12 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶನಿವಾರಸಂತೆ ನಾಡಕಚೇರಿ, ತಾ. 18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಭಾಗಮಂಡಲ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣ, ತಾ. 18ರಂದು ಬೆಳಿÀಗ್ಗೆ 12.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಪ್ರವಾಸಿ ಮಂದಿರ ನಾಪೋಕ್ಲು, ತಾ. 20 ರಂದು ಬೆಳಿಗ್ಗೆ 12 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವೀರಾಜಪೇಟೆ ಪಟ್ಟಣ ಪಂಚಾಯಿತಿ ಕಟ್ಟಡ ಸಭಾಂಗಣ, ತಾ.20ರಂದು 12.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಕಟ್ಟಡ ಸಭಾಂಗಣದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222100, 9480806281 ಮತ್ತು 9480806282 ಅಥವಾ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ - 571201 ಸಂಪರ್ಕಿಸಬಹುದು ಎಂದು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.