ಕೂಡಿಗೆ, ನ. 14: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದ ಕನಕದಾಸರ ಯುವಕ ಸಂಘದ ವತಿಯಿಂದ ಕನಕದಾಸ ಜಯಂತಿ ಆಚರಣೆ ತಾ. 15 ರಂದು (ಇಂದು) ನಡೆಯಲಿದೆ.

ಕನಕದಾಸರ ಯುವಕ ಸಂಘದ ಅಧ್ಯಕ್ಷ ಟಿ.ಕೆ. ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಕುರುಬರ ಸಂಘದ ಉಪಾಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ಡಿ.ಎಸ್. ಗಣೇಶ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ತೊರೆನೂರು ಗ್ರಾ.ಪಂ. ಅಧ್ಯಕ್ಷ ದೇವರಾಜು, ಜಿಲ್ಲಾ ಸಂಗೋಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆಯ ಕಾರ್ಯಾಧ್ಯಕ್ಷ ಸಿ.ಕೆ. ಉದಯಕುಮಾರ್, ಅಧ್ಯಕ್ಷ ಟಿ.ಕೆ. ವಸಂತ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.