ಮಡಿಕೇರಿ, ನ.15: ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಕನಕದಾಸರ ಸಂದೇಶಗಳನ್ನು ತಿಳಿದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕರೆ ನೀಡಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಡಿ.ದೇವರಾಜು ಅರಸು ಭವನದಲ್ಲಿ ನಡೆದ ಕನಕದಾಸರ ಜಯಂತಿ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕನಕದಾಸರು ‘ನಾನು ಹೋದರೆ, ಹೋದೇನೂ’ ಎಂಬ ಸಂದೇಶ ಸಾರಿದ್ದಾರೆ. ‘ನಾನು’ ಎಂಬದನ್ನು ಬಿಡಬೇಕು, ಇದರಿಂದ ಸಮಸ್ಯೆಗಳು ಹೆಚ್ಚಾಗುತ್ತವೆಯೇ ಹೊರತು, ಪರಿಹಾರವಾಗುವದಿಲ್ಲ, ಆದ್ದರಿಂದ ಸೌಜನ್ಯ, ಭ್ರಾತೃತ್ವ, (ಮೊದಲ ಪುಟದಿಂದ) ಸಹೋ ದರತೆ ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ‘ನಾನು’ ಎಂಬದನ್ನು ಬಿಟ್ಟರೆ, ಉತ್ತಮ ಜೀವನ ನಡೆಸಬಹುದು ಎಂಬದನ್ನು ಕನಕದಾಸರು ಸಾರಿದ್ದಾರೆ ಎಂದು ಜಿಲ್ಲಾಧಿಕಾರಿ ನೆನಪಿಸಿದರು. ಮುಖ್ಯ ಭಾಷಣ ಮಾಡಿದ ಸರಸ್ವತಿ ಡಿಇಡಿ ಕಾಲೇಜಿನ ಪ್ರಾಂಶುಪಾಲ ಕುಮಾರ್; ಭಕ್ತ ಕನಕದಾಸರು ಅಂಬಲಿ, ಕಂಬಳಿ, ಹಮ್ಮು ಮತ್ತು ಬಿಮ್ಮು ಈ ನಾಲ್ಕು ಪದಗಳಲ್ಲಿ ಸಾಕಷ್ಟು ಅರ್ಥಗಳನ್ನು ತಿಳಿಸಿದ್ದಾರೆ. ಪ್ರತಿಯೊಬ್ಬರಿಗೂ ಊಟ, ಬಟ್ಟೆ ಅತಿ ಅವಶ್ಯಕ, ಇವುಗಳನ್ನು ಗಳಿಸಲು ಹಮ್ಮು, ಬಿಮ್ಮು ಬಿಡಬೇಕು ಎಂದು ಹೇಳಿದ್ದಾರೆ ಎಂದರು.

ಭಕ್ತ ಕನಕದಾಸ ವಿಚಾರಧಾರೆ ಹಾಗೂ ಜೀವನ ಚರಿತ್ರೆ ತಿಳಿದುಕೊಳ್ಳಬೇಕು. ಇದರಿಂದ ಹೆಚ್ಚಿನ ಜ್ಞಾನಾರ್ಜನೆ ದೊರೆಯುತ್ತದೆ ಎಂದು ಕುಮಾರ್ ಅವರು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ; ಕನಕದಾಸರ ಕೀರ್ತನೆಗಳು ಪ್ರತಿಯೊಬ್ಬರೂ ಓದಬೇಕು. ಇದರಿಂದ ಸಮಾಜದಲ್ಲಿ ಬದಲಾವಣೆ ಕಾಣಬಹುದು ಎಂದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕÀ ಜಿ.ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೊ, ಪೌರಾಯುಕ್ತ ರಮೇಶ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪುಟ್ಟರಾಜು, ಲೋಕೋ ಪಯೋಗಿ ಇಲಾಖೆಯ ಕಾರ್ಯ ಪಾಲಕ ಎಂಜಿನಿಯರ್ ಇಬ್ರಾಹಿಂ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಕರ್ನಲ್ ಗೀತಾ, ಬಿಸಿಎಂ ಇಲಾಖೆಯ ಅಧಿಕಾರಿ ಕವಿತಾ, ಐಟಿಡಿಪಿ ಇಲಾಖೆಯ ವ್ಯವಸ್ಥಾಪಕ ರಾದ ದೇವರಾಜು ಇತರರು ಇದ್ದರು. ಕಲಾವಿದ ಶಂಕರಯ್ಯ ನಾಡಗೀತೆ ಹಾಡಿದರು, ಮಂಜುನಾಥ್ ನಿರೂಪಿಸಿದರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನ್ ಸ್ವಾಗತಿಸಿ, ವಂದಿಸಿದರು.

ಸೋಮವಾರಪೇಟೆ: ಮಹಾನ್ ದಾರ್ಶನಿಕರ ಜನ್ಮ ದಿನಾಚರಣೆಗಳು ಕೇವಲ ಒಂದು ಜನಾಂಗಕ್ಕೆ ಮಾತ್ರ ಸೀಮಿತವಾಗಬಾರದು. ಅದು ಇಡೀ ಸಮಾಜದ ಆಚರಣೆಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೊಕೇಶ್ವರಿ ಗೋಪಾಲ್ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕನಕದಾಸ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಡೀ ಸಮಾಜವೇ ಒಟ್ಟಾಗಿ ಮಹಾನ್ ಸಂತರು, ದಾರ್ಶನಿಕರ ಆಚರಣೆಗಳನ್ನು ಆಚರಿಸಿದರೆ ಮಾತ್ರ ಕಾರ್ಯಕ್ರಮಗಳಿಗೆ ಅರ್ಥಬರುತ್ತದೆ ಎಂದ ಅವರು, ಸಮಾಜದಲ್ಲಿ ಮಾನವೀಯ ಮೌಲ್ಯಗಳಿಗೆ ಬೆಲೆ ನೀಡುವ ಕಾರ್ಯ ಎಲ್ಲರಿಂದಲೂ ಆಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾ. ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ದಾಸ ಸಾಹಿತ್ಯಕ್ಕೆ ಶ್ರೇಷ್ಠ ಕೊಡುಗೆಯನ್ನು ನೀಡಿದ ಕನಕದಾಸರು ಕೀರ್ತನೆ ಯೊಂದಿಗೆ ನೈತಿಕ ಮೌಲ್ಯಗಳನ್ನು ಪಸರಿಸುವ ಕಾರ್ಯವನ್ನು 15ನೇ ಶತಮಾನದಲ್ಲಿ ಮಾಡಿದ್ದರು. ಬಲಾಡ್ಯರು-ದುರ್ಬಲರು ಮತ್ತು ಮೇಲು-ಕೀಳು ಎಂಬ ಭಾವನೆಗಳನ್ನು ತೊಡೆದು ಹಾಕಿದ್ದ ಕನಕದಾಸರು ಅಂದಿನ ದಿನಗಳಲ್ಲಿ ಸÀಮಾನತೆಯ ಸಾರವನ್ನು ಸಮಾಜಕ್ಕೆ ಧಾರೆ ಎರೆದಿದ್ದಾರೆ. ಪ್ರತಿಯೊಬ್ಬ ಮನುಷ್ಯನು ನಾನು ಎಂಬ ಅಹಂ ಬಿಟ್ಟು ಸಮಾಜ ಸುಧಾರಣೆಗೆ ಪ್ರಯತ್ನಿಸಿದರೆ ಮಾತ್ರ ಜೀವನದಲ್ಲಿ ಸಾರ್ಥಕತೆಯನ್ನು ಪಡೆದುಕೊಳ್ಳಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ತಂಗಮ್ಮ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಸಿ.ಕೆ. ಉದಯ್‍ಕುಮಾರ್, ಕನಕದಾಸರ ಜೀವನ ಚರಿತ್ರೆ ಮತ್ತು ಸಮಾಜಕ್ಕೆ ದಾಸ ಸಾಹಿತ್ಯದ ಕೊಡುಗೆ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್, ತಹಶೀಲ್ದಾರ್ ಗೋವಿಂದÀರಾಜ್, ಸಂಗೊಳ್ಳಿರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಕೆ. ವಸಂತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಶ್ರೀಕಾಂತ್, ಜಿಲ್ಲಾ ಕುರುಬರ ಸಂಘದ ಉಪಾಧ್ಯಕ್ಷ ಡಿ.ಎಸ್ ಗಣೇಶ್, ಕುರುಬರ ಹಿತರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಡಿ.ಆರ್. ಪ್ರಭಾಕರ್ ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ ಕಾರ್ಯಕ್ರಮ ನಿರ್ವಹಿಸಿದರು. ತಾಲೂಕಿನ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಕನಕದಾಸರ ಕೀರ್ತನೆ ನಡೆಯಿತು.

ವೀರಾಜಪೇಟೆÀ: ರಾಜ್ಯದಲ್ಲಿ ಈ ಹಿಂದೆ ಇದ್ದ ದಾಸರು , ಶರಣರು ನೀಡಿದ ಸಂದೇಶಗಳು ಸಮಾಜ ಸುಧಾರಣೆಯ ಅತ್ಯಅಮೂಲ್ಯ ವಾಗಿರುತ್ತದೆ. ಇವು ಜನರಿಗೆ ಸದಾ ಧಾರ್ಮಿಕತೆಯ ಹಾಗೂ ಸಾಮಾಜಿಕ ಮೌಲ್ಯಗಳ ಅರಿವು ಮೂಡಿಸುವ ದಾರಿ ದೀಪವಾಗಿದೆ ಎಂದು ತಾಲೂಕು ಪ್ರಬಾರ ತಹಶೀಲ್ದಾರ್ ಮಹೇಶ್ ಹೇಳಿದರು.

ಇಲ್ಲಿನ ಮಿನಿ ವಿಧಾನಸೌಧದಲ್ಲಿ ಇಂದು ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕನನಕದಾಸರ ಜಯಂತಿ ಪ್ರಯುಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಇದೇ ಸಂದರ್ಭ ದಲ್ಲಿ ಉಪ ತಹಶೀಲ್ದಾರ್ ಎಚ್.ಕೆ. ಪೊನ್ನು, ಕಂದಾಯ ಪರೀವೀಕ್ಷಕ ಪಳಂಗಪ್ಪ , ಚುನಾವಣಾ ವಿಭಾಗದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿ ದ್ದರು. ಶಿಕ್ಷಕ ಎ.ವಿ. ಮಂಜುನಾಥ್ ಕನಕದಾಸರ ಕುರಿತು ಮಾತನಾಡಿದರು.