ಶ್ರೀಮಂಗಲ, ನ. 15: ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ ನೂತನ ಕಚೇರಿಯ ಕಟ್ಟಡ ತಾ. 18 ರಂದು ಉದ್ಘಾಟನೆಯಾಗಲಿದೆ.
ಕಟ್ಟಡವನ್ನು ರಾಜ್ಯದ ವಸತಿ ಮತ್ತು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ಜಿ. ಬೋಪಯ್ಯ ವಹಿಸಲಿದ್ದು, ಸಭಾ ಕಾರ್ಯಕ್ರಮವನ್ನು ಟಿ. ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಮಚ್ಚಾಮಾಡ ಎಂ. ಸುಮಂತ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಜಿ.ಪಂ. ಸದಸ್ಯ ಮುಕ್ಕಾಟೀರ ಶಿವು ಮಾದಪ್ಪ, ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್, ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ತಾ.ಪಂ. ಸದಸ್ಯೆ ಪಿ.ಟಿ. ಸರೋಜ, ತಾ.ಪಂ. ಮಾಜಿ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕಟ್ಟೇರ ವಿಶ್ವನಾಥ್, ಗ್ರಾ.ಪಂ. ಉಪಾಧ್ಯಕ್ಷೆ ಕೆ.ಎಸ್. ಯಶೋದ, ಗ್ರಾ.ಪಂ. ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಲಕ್ಷ್ಮಿಪ್ರಿಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹೆಚ್.ಎ. ಷಣ್ಮುಗ, ಪಿಡಿಓ ಎಂ.ಎಲ್. ಕವಿತ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.