ಸೋಮವಾರಪೇಟೆ, ನ. 15: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಇಲ್ಲಿನ ಜ್ಞಾನವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿನಿಯರಾದ ಪಿ.ಬಿ. ಸಂಜನ, ಪಿ.ಬಿ. ಸಿಂಚನ, ಕೆ.ಹೆಚ್. ಸೃಜನ ಅವರುಗಳು ಗೋಣಿಕೊಪ್ಪದಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿದ್ದು, ಬೆಳಗಾವಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.