ಚೆಟ್ಟಳ್ಳಿ, ನ. 16: ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗುಮ್ಮನಕೊಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಬರೇರಾ ತಬಸುಮ್ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಮಡಿಕೇರಿಯ ಸೆಂಟ್ ಮೈಕಲ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಕಂಠಪಾಠ ಸ್ಪರ್ಧೆಯಲ್ಲಿ ಬರೇರಾ ತಬಸುಮ್ ಆಯ್ಕೆಯಾಗಿದ್ದಾರೆ.