ಮಡಿಕೇರಿ, ನ. 16: ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆಯು ಡಬ್ಲ್ಯುಎಸ್) ವತಿಯಿಂದ ಈಗಾಗಲೇ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಮೇ ಅಂತ್ಯದೊಳಗೆ ಪೂರ್ಣ ಗೊಳಿಸುವಂತೆ ಸಂಬಂಧಪಟ್ಟ ಇಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.
ನಗರದ ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ನಗರಸಭೆ ವ್ಯಾಪ್ತಿಯ ರಸ್ತೆ, ಚರಂಡಿ, ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಕಾಮ ಗಾರಿಗಳ ಪ್ರಗತಿ ಬಗ್ಗೆ ಇಂಜಿನಿಯರ್ ಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ಈಗಾಗಲೇ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಆರಂಭ ವಾಗಿರುವ ಕಾಮಗಾರಿ ಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿರುವ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಒಂದು ವಾರದೊಳಗೆ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಕೆಯುಡಬ್ಲ್ಯುಎಸ್ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿ ಗಳನ್ನು ಮೇ ಅಂತ್ಯದೊಳಗೆ ಪೂರ್ಣ ಗೊಳಿಸದಿದ್ದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವದು ಎಂದು ಜಿಲ್ಲಾಧಿಕಾರಿ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು. ಕ್ರಿಯಾ ಯೋಜನೆಗೆ ಬಾಕಿ ಇರುವ ಕಾಮ ಗಾರಿಗಳ ಕಡತವನ್ನು ಸೋಮವಾರ ಸಲ್ಲಿಸುವಂತೆ ಇದೇ ಸಂದರ್ಭ ತಿಳಿಸಿದರು.
ಹಳೇ ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಮಳೆ ಹಾನಿ ಕಾಮಗಾರಿಗಳಿಗೆ
(ಮೊದಲ ಪುಟದಿಂದ) ರೂ. 6.46 ಕೋಟಿ ಬಿಡುಗಡೆ ಮಾಡಲಾಗಿದ್ದು, ಈ ಕಾಮಗಾರಿಗಳನ್ನು ಸಹ ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದರು.
ನಗರೋತ್ಥಾನ ಮೂರನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹೇಮಂತ್ ಕುಮಾರ್, ಸಹಾಯಕ ಇಂಜಿನಿಯರ್ಗಳಾದ ವನಿತಾ, ನಾಗರಾಜು ಅವರು ರಸ್ತೆ, ಚರಂಡಿ, ತಡೆಗೋಡೆ, ವಾಣಿಜ್ಯ ಸಂಕೀರ್ಣ, ನೀರಿನ ಟ್ಯಾಂಕ್ ಮತ್ತಿತರ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.
ಪೌರಾಯುಕ್ತ ರಮೇಶ್ ಸ್ಟೋನ್ಹಿಲ್ನಲ್ಲಿ ಮಳೆ ಕಾರಣದಿಂದಾಗಿ ಘನತ್ಯಾಜ್ಯ ಸಮರ್ಪಕ ವಿಲೇವಾರಿಗೆ ತೊಂದರೆ ಉಂಟಾಯಿತು ಎಂದು ಮಾಹಿತಿ ನೀಡಿದರು.
ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶ್ರೀನಿವಾಸ್, ನಗರಸಭೆಯ ಘನತ್ಯಾಜ್ಯ ವಿಭಾಗದ ಅಧಿಕಾರಿ ನಾಚಪ್ಪ, ಆರೋಗ್ಯ ವಿಭಾಗದ ಅಧಿಕಾರಿ ರಮೇಶ್, ಲೆಕ್ಕಾಧಿಕಾರಿ ತಾಹಿರ್ ಹಲವು ಮಾಹಿತಿ ನೀಡಿದರು.