ಸೋಮವಾರಪೇಟೆ, ನ. 16: ತಾಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿಯ 14ನೇ ಹಣಕಾಸು ಅನುದಾನದಲ್ಲಿ ಪಂಚಾಯಿತಿ ವ್ಯಾಪ್ತಿಯ ಅಂಗವಿಕಲ ಫಲಾನುಭವಿಗಳಿಗೆ ಉಚಿತವಾಗಿ ನೀರು ಸಂಗ್ರಹದ ಸಿಂಟೆಕ್ಸ್ ಡ್ರಮ್‍ಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಂ. ಸುಭಾಷ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 24 ಮಂದಿ ಫಲಾನುಭವಿಗಳಿಗೆ ಸಿಂಟೆಕ್ಸ್‍ಡ್ರಮ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಿ.ಜಿ. ಪಳಂಗಪ್ಪ ಸೇರಿದಂತೆ ಸದಸ್ಯರುಗಳು, ವಿಕಲಚೇತನರ ಕಲ್ಯಾಣಾಭಿವೃದ್ಧಿ ಇಲಾಖೆಯ ಜಿಲ್ಲಾಧಿಕಾರಿ ಕಾವೇರಪ್ಪ, ಗ್ರಾಮಾಭಿವೃದ್ಧಿ ಅಧಿಕಾರಿ ಟಿ.ಆರ್. ಕೇಶವ ಸೇರಿದಂತೆ ಇನ್ನಿತರರು ಹಾಜರಿದ್ದರು.