ಮಡಿಕೇರಿ, ನ. 16 : ಸಿರಿಗನ್ನಡ ವೇದಿಕೆ ಕೊಡಗು ಜಿಲ್ಲಾ ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಗರದ ಪತ್ರಿಕಾ ಭವನದಲ್ಲಿ ಯುದ್ಧ ಮತ್ತು ನಾಗರೀಕತೆ ಡಿಜಿಟಲ್ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಪುಸ್ತಕವನ್ನು ಕೊಡಗು ಪ್ರೆಸ್ ಕ್ಲಬ್ ಖಜಾಂಚಿ ರೆಜಿತ್ ಕುಮಾರ್ ಬಿಡುಗಡೆ ಮಾಡಿದರು.
ಹಿರಿಯ ಸಾಹಿತಿ ನಾಗೇಶ್ ಕಾಲೂರು, ಜಯಲಕ್ಷ್ಮಿ, ಹೇಮಲತಾ, ಹೃಥ್ವಿಕ್, ರಂಜಿತ್ ಕವಲಪಾರ, ಕಿಶೋರ್ ರೈ, ವೀಣಾ ಕವನ ವಾಚಿಸಿದರು.
ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಟಿ.ಪಿ. ರಮೇಶ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಲೋಕೇಶ್ ಸಾಗರ್, ವಕೀಲ ವಿದ್ಯಾಧರ, ಟಿ.ಪಿ. ರಮೇಶ್ ಮಾತನಾಡಿದರು.
ಸಿರಿಗನ್ನಡ ವೇದಿಕೆಯ ಜಿಲ್ಲಾಧ್ಯಕ್ಷ ಅಲ್ಲಾರಂಡ ವಿಠಲ್ ನಂಜಪ್ಪ ಇದ್ದರು.