ಚೆಟ್ಟಳ್ಳಿ, ನ. 16: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಚೆಟ್ಟಳ್ಳಿಯ ಸಂಘದ ನರೇಂದ್ರ ಮೋದಿ ಸಹಕಾರ ಭವನದಲ್ಲಿ ನಡೆದ 66ನೇ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾಗಿರುವ ಭಾರತೀಯ ಸೇನೆ, ವಾಯುಪಡೆ, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದವರು, ಕ್ರೀಡೆ, ಕೃಷಿ, ಚಲನಚಿತ್ರ, ಸಮಾಜ ಸೇವಕರು ಹಾಗೂ ಪತ್ರಕರ್ತರನ್ನು ಸನ್ಮಾನಿಸಿ, ಗೌರವಿಸಲಾಯಿತು.