ಶನಿವಾರಸಂತೆ, ನ. 17: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಶನಿವಾರಸಂತೆ ಹೋಬಳಿ ಘಟಕದ ಸಹಭಾಗಿತ್ವದಲ್ಲಿ ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾ. 18 ರಂದು (ಇಂದು) ಬೆಳಿಗ್ಗೆ 10.30ಕ್ಕೆ ಶಾಂತಮಲ್ಲ ಸ್ವಾಮಿಗಳ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಕುಶಾಲನಗರದ ನಿವೃತ್ತ ಪ್ರಾಂಶುಪಾಲ ಎಸ್.ವಿ. ಶಿವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು; ಕಸಾಪ ಜಿಲ್ಲಾ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸೋಮವಾರಪೇಟೆ ಪತ್ರಕರ್ತ ಎಸ್.ಎ. ಮುರಳೀಧರ್ ‘ಕೊಡಗಿನ ವೀರಶೈವ ಅರಸರು’ ವಿಷಯದ ಬಗ್ಗೆ ಉಪನ್ಯಾಸ ನೀಡುವರು.