ಮಡಿಕೇರಿ, ನ. 17: ಪ್ರಸಕ್ತ ಸಾಲಿನಲ್ಲಿ ಗ್ರೂಪ್-ಎ ಗ್ರೂಪ್-ಬಿ ವೃಂದದ, ಸಿವಿಲ್, ಸೆಷನ್ಸ್, ಡಿಸ್ಟ್ರಿಕ್ಟ್ ಜಡ್ಜ್ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. 25 ಕೊನೆಯ ದಿನವಾಗಿದೆ. 3 ತಿಂಗಳು ಗ್ರೂಪ್-ಎ ಗ್ರೂಪ್-ಬಿ ವೃಂದದ-ಸಿವಿಲ್, ಸೆಷನ್ಸ್, ಡಿಸ್ಟ್ರಿಕ್ಟ್ ಜಡ್ಜ್ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನಡೆಯಲಿದ್ದು, ವಿದ್ಯಾರ್ಹತೆ ಎಲ್‍ಎಲ್‍ಬಿ ಪದವಿಯಲ್ಲಿ ಕನಿಷ್ಠ ಶೇ.50 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ಬಾರ್ ಕೌನ್ಸಿಲ್‍ನಲ್ಲಿ ನೋಂದಣಿ ಹೊಂದಿರಬೇಕು. ತಿತಿತಿ.sತಿ.ಞಚಿಡಿ.ಟಿiಛಿ.iಟಿ ಅರ್ಜಿ ದೊರೆಯುತ್ತದೆ ಹಾಗೂ ಅರ್ಜಿಯನ್ನು ರಿuಜge.ಠಿeಣಛಿ gmಚಿiಟ.ಛಿom ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಅನುಸೂಚಿತ ಜಾತಿ ಮತ್ತು ಅನುಸೂಚಿತ ವರ್ಗಕ್ಕೆ ಸೇರಿದ ಜಾತಿ ಪಟ್ಟಿಯಲ್ಲಿರುವ ಜಾತಿಗೆ ಸೇರಿರತಕ್ಕದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರತಕ್ಕದ್ದು. ದೈಹಿಕ ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ ನಿಗದಿತ ಪ್ರಾಧಿಕಾರದಿಂದ ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅಂಗವಿಕಲ ಪ್ರಮಾಣ ಪತ್ರ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ 08272-225531, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ 08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ 08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ
ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ವೇತನದ ತಂತ್ರಾಂಶದಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನ್ನು ನೋಡಬಹುದು. ಅರ್ಜಿಯನ್ನು ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಿಂದ ಪಡೆದುಕೊಳ್ಳಬಹುದು.
ಅರ್ಜಿಯನ್ನು Ssಠಿ.ಠಿosಣmeಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಪ್ರವೇಶ ಪರೀಕ್ಷೆಗೆ
2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಜವಾಹರ್ ನವೋದಯ ವಿದ್ಯಾಲಯ ಗಾಳಿಬೀಡು ಇಲ್ಲಿಗೆ ಒಂಬತ್ತನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಗೆ ಅರ್ಜಿ ಅಹ್ವಾನಿಸಲಾಗಿದೆ.
ಕೊಡಗು ಜಿಲ್ಲೆಯ ಮಾನ್ಯತೆ ಪಡೆದ ಯಾವದೇ ಶಾಲೆಯ ಎಂಟನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳು ಈ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ ತಿತಿತಿ.ಟಿಚಿvoಜಚಿಜಚಿಥಿಚಿ.gov.iಟಿನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ. ಪರೀಕ್ಷೆಯು ಫೆಬ್ರವರಿ 8 ರಂದು ನಡೆಯಲಿದೆ ಎಂದು ನವೋದಯ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ತರಬೇತಿ ಶಿಬಿರಕ್ಕೆ
ಕರ್ನಾಟಕ ಸಾಹಿತ್ಯ ಅಕಾಡೆಮಿಯು 2019ರ ಡಿಸೆಂಬರ್ ಅಥವಾ 2020ರ ಜನವರಿಯಲ್ಲಿ ಗಿರಿಜನ ಉಪಯೋಜನೆಯಡಿ ರಾಜ್ಯಮಟ್ಟದ ಐದು ದಿನಗಳ ಪುಸ್ತಕ ಮುದ್ರಣ ಪ್ರಕ್ರಿಯೆಗಳ ತರಬೇತಿ ಶಿಬಿರವನ್ನು ಏರ್ಪಡಿಸಲು ಉದ್ದೇಶಿಸಿದೆ. ಆಸಕ್ತಿಯಿರುವ 20 ರಿಂದ 30 ವರ್ಷ ವಯಸ್ಸಿನ ರಾಜ್ಯದ ಎಲ್ಲಾ ಭಾಗದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾ. 25 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ಕರಿಯಪ್ಪ ಅವರು ತಿಳಿಸಿದ್ದಾರೆ.
ಪುಸ್ತಕ ಬಹುಮಾನ ಯೋಜನೆಗೆ
ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ 2018ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗೆ ಈಗಾಗಲೇ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿತ್ತು. ಪುಸ್ತಕಗಳನ್ನು ಸಲ್ಲಿಸದೇ ಇರುವವರಿಗೆ ಮತ್ತೊಮ್ಮೆ 2018ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಪುಸ್ತಕಗಳನ್ನು ಸಲ್ಲಿಸಲು ತಾ. 30 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಸಲ್ಲಿಸಿರುವವರು ಮತ್ತೆ ಸಲ್ಲಿಸಬೇಕಾಗಿಲ್ಲ. ಅವನ್ನೇ ಪರಿಗಣಿಸಲಾಗುವದು. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2018ರ ಜನವರಿ 1 ರಿಂದ 2018ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2018 ಎಂದು ಮುದ್ರಿತವಾಗಿರಬೇಕು.
ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ-30 ವರ್ಷ ಒಳಗಿರುವ ಯುವ ಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತಪ್ರತಿ ಕಳುಹಿಸಿಕೊಡಬೇಕು. ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಆತ್ಮಕಥೆ, ಸಾಹಿತ್ಯ ವಿಮರ್ಶೆ (ಸಾಹಿತ್ಯ ಚರಿತ್ರೆ, ಸಾಹಿತ್ಯ ತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಎಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ, ಮಾನವಿಕ (ಜಾನಪದ, ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ), ಸಂಶೋಧನೆ(ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕøತಿ ಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ/ ಅಂಕಣ ಬರಹ, ಅನುವಾದ-ಸೃಜನ (ಕಾದಂಬರಿ, ಕಾವ್ಯ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನಚರಿತ್ರೆ), ಸೃಜನೇತರ (ಶಾಸ್ತ್ರಸಾಹಿತ್ಯ, ಸಾಹಿತ್ಯ ವಿಮರ್ಶೆ), ಅನುವಾದ-2 (ಸೃಜನ, ಸೃಜನೇತರ) ಕನ್ನಡದಿಂದ ಅನ್ಯಭಾಷೆಗೆ ಅನುವಾದಗೊಂಡ ಕೃತಿ. ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನ-2018ರಲ್ಲಿ ಪ್ರಕಟವಾದ ಹೊಸ ಬರಹಗಾರರ ಮೊದಲ ಸ್ವತಂತ್ರ ಕೃತಿಯೆಂದು ಖಾತರಿಪಡಿಸುವ ದೃಢೀಕರಣ ಪತ್ರ ಲಗತ್ತಿಸಬೇಕು. ಕನ್ನಡದಿಂದ ಇಂಗ್ಲೀಷಿಗೆ ಅನುವಾದ.
ಈ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ಡ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ 2019ರ ತಾ. 30 ರೊಳಗೆ ತಲಪಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್. ಕರಿಯಪ್ಪ ತಿಳಿಸಿದ್ದಾರೆ.