ಮಡಿಕೇರಿ, ನ. 17: ಕೊಡಗು ನೆರೆ ಸಂತ್ರಸ್ತರಿಗೆ ನೆರವಾಗುವದಕ್ಕಾಗಿ ಸುಳ್ಯದ ಎ.ಪಿ.ಎಂ.ಸಿ. ವತಿಯಿಂದ ರೂ. 2 ಲಕ್ಷಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಎ.ಪಿ.ಎಂ.ಸಿ. ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಾಮಾನ್ಯ ಸಭೆ ಇತ್ತೀಚೆಗೆ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.