ಮಡಿಕೇರಿ, ನ. 17: ಆರ್ಜಿ ಗ್ರಾಮ ಪಂಚಾಯಿತಿ ನಮ್ಮ ಗ್ರಾಮ, ನಮ್ಮ ಯೋಜನೆಯ ಗ್ರಾಮ ಸಭೆ ತಾ. 19 ರಂದು ಪೂರ್ವಾಹ್ನ 10.30 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎನ್. ಗಾಯಿತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಬಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.