ಸೋಮವಾರಪೇಟೆ,ನ.18: ಆಲೂರು ಸಿದ್ದಾಪುರ-ಗೋಣಿಮರೂರು ಸಂಪರ್ಕ ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸಬೇಕೆಂದು ಕಣಗಾಲ್ ಭೀಮ ಆರ್ಮಿ, ತಪ್ಪಿದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಹೋರಾಟ ಹಮ್ಮಿಕೊಳ್ಳುವದಾಗಿ ತಿಳಿಸಿದೆ.
ಕಣಗಾಲು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರೇ ಹೆಚ್ಚಾಗಿದ್ದು, ರಸ್ತೆಗಳಲ್ಲಿ ಗುಂಡಿ ಬಿದ್ದರೂ, ಸರಿಪಡಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಭೀಮ ಆರ್ಮಿಯ ಮಹಿಳಾ ಘಟಕದ ಶುಭ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎರಡೂ ಬದಿಯಲ್ಲಿ ಚರಂಡಿ ನಿರ್ಮಿಸಿ ನೀರು ಹರಿಯಲು ಅವಕಾಶ ಮಾಡಿಕೊಡಬೇಕೆಂದ ಅಂಬೇಡ್ಕರ್ ಯುವಕ ಸಂಘದ ರವಿನಂದನ್ ಆಗ್ರಹಿಸಿದ್ದಾರೆ. ಒಂದು ತಿಂಗಳ ಒಳಗೆ ಸಮಸ್ಯೆ ಬಗೆಹರಿಸದಿದ್ದಲ್ಲಿ ಪ್ರತಿಭಟಿಸಲಾಗವದು ಎಂದು ಗ್ರಾಮಸ್ಥರು ಹೇಳಿಕೆ ನೀಡಿದ್ದಾರೆ.