ಶನಿವಾರಸಂತೆ: ಆಲೂರು-ಸಿದ್ದಾಪುರ ಗ್ರಾಮದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ದೈಹಿಕ ಶಿಕ್ಷಣ ಹಾಗೂ ಪ್ರಭಾರ ಮುಖ್ಯ ಶಿಕ್ಷಕ ವಿ.ಆರ್. ಪರಮೇಶ್ವರಪ್ಪ, ಶಿಕ್ಷಕರಾದ ಹೆಚ್.ಎ. ಕಾಂತ್ ಹಾಗೂ ಇಂದ್ರಾಣಿ ಅವರು ವರ್ಗಾವಣೆಗೊಂಡ ಪ್ರಯುಕ್ತ ಬೀಳ್ಕೊಡಲಾಯಿತು.
ಪ್ರಸ್ತುತ ಪ್ರಭಾ ಮುಖ್ಯ ಶಿಕ್ಷಕಿ ಶುೃತಿ ಹಾಗೂ ಉಪನ್ಯಾಸಕ ಗಣೇಶ್ ಭಟ್ ಮಾತನಾಡಿದರು. ವಿದ್ಯಾರ್ಥಿಗಳು, ಶಿಕ್ಷಕರು, ವಿದ್ಯಾರ್ಥಿಗಳ ಬಾಂಧವ್ಯದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಸ್ವಚರಚಿತ ಕವನಗಳನ್ನು ವಾಚಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭರತೇಶ್ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರು, ನಿವೃತ್ತ ಶಿಕ್ಷಕಿ ಲಲಿತಮ್ಮ, ಶಿಕ್ಷಕ ಧರ್ಮಪ್ಪ, ಉಪನ್ಯಾಸಕರು, ಶಿಕ್ಷಕರು ಉಪಸ್ಥಿತರಿದ್ದರು.ಸೋಮವಾರಪೇಟೆ: ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಚೈಲ್ಡ್ ಲೈನ್ ಸೇ ದೋಸ್ತಿ ಕಾರ್ಯಾಗಾರ ನಡೆಯಿತು.
ಐಗೂರಿನ ಮುಖ್ಯ ರಸ್ತೆಗಳಲ್ಲಿ ಮಕ್ಕಳು ಜಾಗೃತಿ ಜಾಥಾ ನಡೆಸಿದರು. ಸಭಾ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಪೊಲೀಸ್ ಠಾಣೆಯ ಎಎಸ್‍ಐ ಸುಂದರ್ ಸುವರ್ಣ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಮಾಹಿತಿ ಒದಗಿಸಿದರು.
ಚೈಲ್ಡ್ ಲೈನ್ ಸಂಸ್ಥೆಯ ಬಿ.ಕೆ. ಕುಮಾರಿ ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್ ಮಕ್ಕಳ ಹಕ್ಕುಗಳು, ಉಚಿತ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು.
ಆರೋಗ್ಯ ಕಾರ್ಯಕರ್ತೆ ಪೂಪತಿ, ಮುಖ್ಯ ಶಿಕ್ಷಕ ಯಶವಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಿಂಗರಾಜ್, ಚೈಲ್ಡ್ ಲೈನ್ ಸಂಸ್ಥೆಯ ಯೋಗೇಶ್, ಪ್ರವೀಣ್, ಶಿಕ್ಷಕ ವರ್ಗದವರು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.ಸಿದ್ದಾಪುರ: ಜಿಲ್ಲಾ ಮಕ್ಕಳ ಸಹಾಯವಾಣಿ ವತಿಯಿಂದ ಚೈಲ್ಡ್ ಲೈನ್ ಸೆ ದೋಸ್ತ್ ಸಪ್ತಾಹ ಕಾರ್ಯಕ್ರಮ ಸಿದ್ದಾಪುರ ಪಟ್ಟಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣಗಳ ಸುರಕ್ಷತೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಸಹಾಯಕ ಅಧಿಕಾರಿ ಧೂಳ್ ಶೆಟ್ಟಿ, ತಮ್ಮಯ್ಯ, ಜಾನ್ ಪೆರೆರಾ, ಆಟೋ ಚಾಲಕರ-ಮಾಲೀಕರ ಸಂಘದ ಅಧ್ಯಕ್ಷ ಎಮ್ಮಾರ್ ಸಲೀಂ, ಪವಿತ್ರ, ಗಿರೀಶ ಹಾಗೂ ಜಿಲ್ಲಾ ಮಕ್ಕಳ ಸಹಾಯವಾಣಿ ಸಂಯೋಜಕ ನವೀನ್ ಕುಮಾರ್, ಶೋಭಾ ಲಕ್ಷ್ಮಿ, ಮಂಜುಳಾ ಹಾಜರಿದ್ದರು.ಸುಂಟಿಕೊಪ್ಪ: ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಹಬ್ಬ ಜಾಥಾ ಹಾಗೂ ಆರಿವು ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಕ್ಕಳ ಘೋಷಣೆ ಕೂಗುತ್ತಾ ಜಾಗೃತಿ ಜಾಥಾ ನಡೆಸಿದರು.
ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಆರಂಭಗೊಂಡ ಜಾಗೃತಿ ಜಾಥಾಕ್ಕೆ ಸುಂಟಿಕೊಪ್ಪ ಠಾಣೆಯ ಎ.ಎಸ್.ಐ. ಶಿವಪ್ಪ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಆರುಂಧತಿ ಮಕ್ಕಳ ಹಕ್ಕುಗಳ ಕುರಿತು ಮಾಹಿತಿ ನೀಡಿದರು.
ಸರಕಾರಿ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಜಿಲ್ಲಾ ಮಕ್ಕಳ ಘಟಕ, ಕೊಡಗು ಜಿಲ್ಲೆ ಇವರ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ ಹಬ್ಬ ಜಾಥಾ ಹಾಗೂ ಅರಿವು ಕಾರ್ಯಕ್ರಮದ ಅಂಗವಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ನೀಡಲಾಯಿತು.
ಮುಖ್ಯೋಪಾಧ್ಯಾಯ ಬಾಲಕೃಷ್ಣ, ಕೊಡಗು ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಶಿಕ್ಷಕಿಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು ಇದ್ದರು.ಕೂಡಿಗೆ: ವಾಲ್ನೂರು-ತ್ಯಾಗತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ಯುವಜನ ಸೇವಾ ಕ್ರೀಡಾ ಇಲಾಖೆಯ ವತಿಯಿಂದ ರೂ. 10,000 ಮೌಲ್ಯದ ಕ್ರೀಡಾ ಉಪಕರಣಗಳನ್ನು ವಿತರಣೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯೆ ಸುನೀತಾ ಮಂಜುನಾಥ್, ಮುಖ್ಯೋಪಾಧ್ಯಾಯ ಹೆಚ್.ಕೆ. ಕುಮಾರ್, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಾಲೆಯ ಶಿಕ್ಷಕರ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.