ಮಡಿಕೇರಿ, ನ.18: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಸಂಬಂಧ ಜಿ.ಪಂ.ಸಿಇಒ ಅವರ ಅಧ್ಯಕ್ಷತೆಯಲ್ಲಿ ಜಿ.ಪಂ.ನೂತನ ಭವನದಲ್ಲಿ ತಾ. 19 ರಂದು (ಇಂದು) ಸಂಜೆ 4.30 ಗಂಟೆಗೆ ಸಭೆ ನಡೆಯಲಿದೆ. ಜಿಲ್ಲೆಯ ವೈದ್ಯಕೀಯ, ತಾಂತ್ರಿಕ, ಡಿಪ್ಲೋಮಾ, ಸ್ನಾತಕೋತ್ತರ, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ ಕೋರಿದ್ದಾರೆ.