ಸಿದ್ದಾಪುರ, ನ. 18: ಸಂಬಂಧಿಕರ ಮನೆಗೆ ಬರುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಮಾಲ್ದಾರೆ ಸಮೀಪದ ಗೇಟ್ ಹಾಡಿ ಬಳಿ ನಡೆದಿದೆ.
ಕೊಪ್ಪ ರಾಣಿಗೇಟ್ ನಿವಾಸಿ ಜೆ.ಕೆ. ರಾಜು ಎಂಬಾತನೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿ. ಚೋಟೆಪಾರೆ ಹಾಡಿಯಲ್ಲಿರುವ ಸಂಬಂಧಿಕರ ಮನೆಗೆ ಬರುತ್ತಿದ್ದ ವೇಳೆ ಗೇಟ್ ಹಾಡಿ ಬಳಿ ಕಾಡಾನೆಯೊಂದು ಹಠಾತ್ ದಾಳಿ ಮಾಡಿದ ಪರಿಣಾಮ ಜೆ.ಕೆ. ರಾಜು ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಬಿದ್ದಿರುವದನ್ನು ಗಮನಿಸಿದ ಸ್ಥಳೀಯರು ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.