ಮಡಿಕೇರಿ, ನ. 18: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೊಟ್ಟಾ 2003 ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಕುರಿತು 40 ಹೊಟೇಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ತಾ. 20 ರಂದು ಬಾಲ ಭವನ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಹತ್ತಿರ, ಮಡಿಕೇರಿ ಇಲ್ಲಿ ಬೆಳಿಗ್ಗೆ 9.30 ಗಂಟೆಗೆ ಆಯೋಜಿಸಲಾಗಿದೆ.