ಮಡಿಕೇರಿ, ನ. 18: ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ‘ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ, ತಂತ್ರಜ್ಞಾನ ಅಳವಡಿಕೆ ಮತ್ತು ಗಣಕೀಕರಣ’ ದಿನಾಚರಣೆ ಹಾಗೂ ‘ಕೊಡಗು ಸಹಕಾರ ರತ್ನ’, ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿ ಪ್ರದಾನ ಸಮಾರಂಭ ತಾ. 20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಎ.ಕೆ. ಮನು ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡಗು ಸಹಕಾರ ರತ್ನ ಪ್ರಶಸ್ತಿ ಪಡೆದಿರುವ ಮಂಡುವಂಡ ಪಿ. ಮುತ್ತಪ್ಪ, ಮಡಿಕೇರಿ ಶ್ರೇಷ್ಠ ಸಹಕಾರಿಗಳಾದ ಬಲ್ಯಮನೆ ಗಣಪತಿ, ಸಂಪಾಜೆ ಕೆ.ಪಿ. ನಾಗರಾಜು, ಬೈರಂಬಾಡ ಬಿ.ಕೆ. ಚಿಣ್ಣಪ್ಪ, ಕೊಡ್ಲಿಪೇಟೆ ಹಾಗೂ ಶ್ರೇಷ್ಠ ಮಹಿಳಾ ಸಹಕಾರಿ ಲೀಲಾ ಮೇದಪ್ಪ, ಸುಂಟಿಕೊಪ್ಪ ಅವರುಗಳಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಸನ್ಮಾನಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೆ.ಪಿ. ಗಣಪತಿ, ಪದಾಧಿಕಾರಿಗಳು ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.