ಮಡಿಕೇರಿ, ನ. 19: ವಸತಿ ನಿಲಯದಲ್ಲಿ ಬಾಲಕಿಯರ ನಡುವೆ ಮಾರಾಮಾರಿ ನಡೆದ ಘಟನೆ ವರದಿಯಾಗಿದೆ. ನಗರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿಂದು ಇಬ್ಬರು ಬಾಲಕಿಯರ ನಡುವೆ ಕ್ಷುಲ್ಲಕ ವಿಚಾರಕ್ಕೆ ಕಲಹವಾಗಿ ಇಬ್ಬರು ಪರಸ್ಪರ ಹಲ್ಲೆ ಮಾಡಿಕೊಂಡಿದ್ದು ಓರ್ವ ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.