ಕುಶಾಲನಗರ, ನ. 19: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಅಂಗವಾಗಿ ಕುಶಾಲನಗರದ ವಿಶ್ವ ಹಿಂದೂ ಪರಿಷತ್ ವತಿಯಿಂದ ಹಿತಚಿಂತಕ 2019 ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕುಶಾಲನಗರದ ವಿಶ್ವಹಿಂದೂ ಪರಿಷತ್‍ನ ಪದಾಧಿಕಾರಿಗಳು ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವದರೊಂದಿಗೆ ಅಭಿಯಾನದ ಕರಪತ್ರವನ್ನು ಬಿಡುಗಡೆಗೊಳಿಸಿದರು.
ವಿಶ್ವಹಿಂದೂ ಪರಿಷತ್‍ನ ಕೊಡಗು ಜಿಲ್ಲಾ ಕಾರ್ಯದರ್ಶಿ ಡಿ.ನರಸಿಂಹ, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಅನಿಶ್‍ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯ ಅಮೃತರಾಜ್, ಪ್ರಮುಖರಾದ ಜಿ.ಎಲ್. ನಾಗರಾಜ್, ಸಂತೋಷ್, ರಾಜೀವ್, ಮುರಳಿ, ತಿಮ್ಮಪ್ಪ, ನವನೀತ್ ಪೊನ್ನೇಟಿ. ಚಂದ್ರಶೇಖರ್ ಮತ್ತಿತರರು ಇದ್ದರು.