ಸೋಮವಾರಪೇಟೆ, ನ. 20: ವಿದ್ಯುತ್ ಮಾರ್ಗದ ವಾಹಕ ಬದಲಾವಣೆ ಕಾಮಗಾರಿ ನಿರ್ವಹಿಸುವ ನಿಟ್ಟಿನಲ್ಲಿ ತಾ.21ರಂದು (ಇಂದು) ಸೋಮವಾರಪೇಟೆ ವಿಭಾಗದಲ್ಲಿ ವಿದ್ಯುತ್ ಸಂಪರ್ಕ ಇರುವದಿಲ್ಲ ಎಂದು ಸೆಸ್ಕ್‍ನ ಪ್ರಭಾರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಶಾಲನಗರ-ಸೋಮವಾರಪೇಟೆ 33 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ಐಪಿಡಿಎಸ್ ಯೋಜನೆಯಡಿಯಲ್ಲಿ ವಾಹಕ ಬದಲಾವಣೆ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ತಾ. 21ರರಂದು (ಇಂದು) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸೋಮವಾರಪೇಟೆ ಪಟ್ಟಣ, ಚೌಡ್ಲು, ಹಾನಗಲ್, ದೊಡ್ಡಮಳ್ತೆ, ಐಗೂರು, ಅಬ್ಬೂರುಕಟ್ಟೆ, ಶಾಂತಳ್ಳಿ, ಕಿರಗಂದೂರು, ಬೆಟ್ಟದಳ್ಳಿ, ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಇರುವದಿಲ್ಲ. ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.