ಮಡಿಕೇರಿ, ನ. 20: ಸಂತ ಅನ್ನಮ್ಮ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಡಿಸೆಂಬರ್ 3 ರಿಂದ 9 ರವರೆಗೆ ಅಮ್ಮತ್ತಿಯ ಕಾರ್ಮಾಡು ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ ನಡೆಯಲಿದೆ.
ಶಿಬಿರದಲ್ಲಿ 72 ವಿದ್ಯಾರ್ಥಿಗಳು ಹಾಗೂ ಹೆಚ್ಚುವರಿ ಹಿರಿಯ ವಿದ್ಯಾರ್ಥಿಗಳು, ಉಪನ್ಯಾಸಕರು ಸೇರಿದಂತೆ 80 ಕ್ಕಿಂತಲೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
ಈ ಏಳು ದಿನಗಳ ಕಾಲ ಶಿಬಿರದ ನಿಯಮಗಳಿಗೆ ಸಂಬಂಧಿಸಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು, ಶಾಲಾ ವಠಾರದಲ್ಲಿ ಶ್ರಮದಾನ, ಕಾರ್ಮಾಡು ಹಾಗೂ ಅಮ್ಮತ್ತಿ ಗ್ರಾಮದ ವ್ಯಾಪ್ತಿಯಲ್ಲಿ ಆರೋಗ್ಯ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವದು ಎಂದು ಕಾಲೇಜಿನ ಕಾರ್ಯಕ್ರಮಾಧಿಕಾರಿ ತಿಳಿಸಿದ್ದಾರೆ.