ಮಡಿಕೇರಿ, ನ. 20: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಾರುಕಟ್ಟೆ ರಸ್ತೆಯ ಕಾಳಮ್ಮ ಕಾಲೋನಿ ವೃತ್ತದಿಂದ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಎರಡು ಬದಿಗಳಲ್ಲಿ ಚರಂಡಿಯ ಮೇಲೆ ಮತ್ತು ರಸ್ತೆಗೆ ಹೊಂದಿಕೊಂಡಂತೆ ಅನಧಿಕೃತವಾಗಿ ಶೆಡ್‍ಗಳನ್ನು ನಿರ್ಮಿಸಿರುವದು ಕಂಡುಬಂದಿದೆ.
ಅನಧಿಕೃತ ಶೆಡ್‍ಗಳನ್ನು ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಯಾವದೇ ಮುನ್ಸೂಚನೆ ನೀಡದೆ ಪಟ್ಟಣ ಪಂಚಾಯಿತಿ ವತಿಯಿಂದ ಅನಧಿಕೃತ ಶೆಡ್‍ಗಳನ್ನು ತೆರವುಗೊಳಿಸಿ ಅದಕ್ಕೆ ತಗುಲಿದ ವೆಚ್ಚವನ್ನು ತಮ್ಮಿಂದಲೇ ಭರಿಸಲಾಗುವದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುಜಯ್‍ಕುಮಾರ್ ತಿಳಿಸಿದ್ದಾರೆ.