ಮಡಿಕೇರಿ, ನ.20 : ಕರಿಕೆ ಗ್ರಾಮದ ಬಾಳೆ ಬಳಪ್ಪು ಕಾಲೋನಿಗೆ ತೆರಳುವ ಸಾರ್ವಜನಿಕ ರಸ್ತೆಗೆ ಅಡ್ಡಲಾಗಿ ಖಾಸಗಿ ವ್ಯಕ್ತಿಯೊಬ್ಬರು ಬೇಲಿ ನಿರ್ಮಿಸಿದ್ದು, ತಕ್ಷಣ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಗ್ರಾಮಸ್ಥರು ಸಂಚಾರಕ್ಕೆ ರಸ್ತೆ ಕೇಳಿದರೆ ಸಂಬಂಧಿಸಿದ ವ್ಯಕ್ತಿ ಕೋವಿ ತೋರಿಸಿ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.