ಮಡಿಕೇರಿ, ನ. 20: ಆಕಾಶವಾಣಿ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ ಈ ಬಾರಿ ಜನವರಿಯಲ್ಲಿ ಮಂಗಳೂರು ಆಕಾಶವಾಣಿಯಲ್ಲಿ ಆಯೋಜಿಸಲಾಗಿದೆ. ಈ ಸ್ಪರ್ಧೆಗೆ ಮಡಿಕೇರಿ ಆಕಾಶವಾಣಿಯಿಂದ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆಮಾಡಿ ಕಳುಹಿಸಲಾಗುವದು. ಇದಕ್ಕಾಗಿ ಪೂರ್ವಭಾವಿ ರಸಪ್ರಶ್ನೆ ಸ್ಪರ್ಧೆಯನ್ನು ಡಿಸೆಂಬರ್‍ನ ಮೊದಲ ವಾರದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಹೆಸರು ನೋಂದಾಯಿಸಿಕೊಳ್ಳಲು ತಾ. 29 ಕೊನೆಯ ದಿನ.

ರಸಪ್ರಶ್ನೆಯ ವಿಷಯ ‘ಪರಿಸರ ಮತ್ತು ನೀರು ಸಂರಕ್ಷಣೆ’ ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಮಂಗಳೂರು ಆಕಾಶವಾಣಿಯಲ್ಲಿ ನಡೆಯುವ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಕಳುಹಿಸಲಾಗುವದು. ಹೆಚ್ಚಿನ ಮಾಹಿತಿಗೆ 8197537777 ನ್ನು ಸಂಪರ್ಕಿಸಬಹುದು.