ಚೆಟ್ಟಳ್ಳಿ: ಸಿದ್ದಾಪುರ ಗ್ರಾಮ ಪಂಚಾಯಿತಿ, ಸ್ವಚ್ಛ ಭಾರತ್ ಮಿಷನ್ ವತಿಯಿಂದ ಸಿದ್ದಾಪುರ ಪಟ್ಟಣದಲ್ಲಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಇಲ್ಲಿನ ವಿವಿಧ ಶಾಲಾ ವಿದ್ಯಾರ್ಥಿಗಳು, ಶಾಲಾ ಮುಖ್ಯೋಪಾಧ್ಯಾಯರು ಬಯಲು ಮುಕ್ತ ಶೌಚಾಲಯ, ಪರಿಸರ ಸಂರಕ್ಷಣೆ ಬಗ್ಗೆ ಜನಜಾಗೃತಿ ಜಾಥಾ ನಡೆಸಿದರು.

ದೇಶದ, ಕುಟುಂಬದ ಗೌರವ ಸಂರಕ್ಷಣೆಗೆ ಬಯಲು ಶೌಚಾಲಯವನ್ನು ಕೊನೆಗೊಳಿಸಿ ಶೌಚಾಲಯ ನಿರ್ಮಿಸಿ, ಒಣ ಕಸ, ಹಸಿ ಕಸ ಬೇರ್ಪಡಿಸಿ, ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ಬಟ್ಟೆಯ ಬ್ಯಾಗ್ ಬಳಸಿ ಎಂಬ ಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಮುಖ್ಯ ಬೀದಿಗಳಲ್ಲಿ ಜಾಗೃತಿ ಮೂಡಿಸುವ ಜಾಥಾ ನಡೆಸಿದರು.

ಕಸವನ್ನು ಎಲ್ಲೆಂದರಲ್ಲಿ ಸುರಿಯುವದನ್ನು ಬಿಟ್ಟು ಮನೆಯ ಹಸಿ ಕಸ ಮತ್ತು ಘನ ಕಸವನ್ನು ವಿಂಗಡಿಸಿ ಪಂಚಾಯಿತಿ ಪೌರಕಾರ್ಮಿಕರಿಗೆ ಒಪ್ಪಿಸಿ ಗ್ರಾಮದ ಶುಚಿತ್ವದಲ್ಲಿ ಕಾಪಾಡುವದರಲ್ಲಿ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂಬದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಅಭಿವೃದ್ಧಿ ಅಧಿಕಾರಿ ಹೇಳಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಗ್ರಾಮದ ಸ್ವಚ್ಛತೆಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದು, ರಸ್ತೆಯ ಬದಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾ ಸಹಾಯದಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವದನ್ನು ಪತ್ತೆಹಚ್ಚಿ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವದರ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕಸದ ಸಮಸ್ಯೆ ಬಗೆ ಹರಿಸಲು ಗ್ರಾಮ ಪಂಚಾಯಿತಿ ಎಲ್ಲಾ ರೀತಿಯಲ್ಲೂ ಸಜ್ಜಾಗಿದ್ದು, ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಜಾಗೃತಿ ಜಾಥಾದಲ್ಲಿ ಸೆಂಟೆನ್ಸ್ ಕಾನ್ವೆಂಟ್, ಸರ್ಕಾರಿ ಪ್ರಾಥಮಿಕ ಶಾಲೆ, ಶ್ರೀಕೃಷ್ಣ ವಿದ್ಯಾಮಂದಿರ, ಇಕ್ರಾ ಪಬ್ಲಿಕ್ ಸ್ಕೂಲ್ ಮುಂತಾದ ಶಾಲಾ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿದ್ದರು.ನಾಪೆÇೀಕ್ಲು: ನಾಪೆÇೀಕ್ಲು ಪಟ್ಟಣದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಜಾಥಾ ನಡೆಯಿತು. ಜಾಥಾದಲ್ಲಿ ನಾಪೆÇೀಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು, ಪ್ರೌಢಶಾಲಾ ವಿಭಾಗದ ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜಾಥಾದ ನೇತೃತ್ವವನ್ನು ನಾಪೆÇೀಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಡಾ. ಅವನಿಜಾ ಸೋಮಯ್ಯ ವಹಿಸಿದ್ದರು. ಈ ಸಂದರ್ಭ ಶಿಕ್ಷಕರಾದ ಕಸ್ತೂರಿ, ಶಿವಶಂಕರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸ್ವಾತಿ, ಪ್ರಮಿಳಾ ಇದ್ದರು.ಸುಂಟಿಕೊಪ್ಪ: ತಾವು ಶಿಕ್ಷಣ ಪಡೆದ ಶಾಲೆಯನ್ನು ಮರೆಯದೆ ಶಾಲೆಯ ಅಭಿವೃದ್ಧಿ ಸಮಿತಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಾಲೆಯ ಏಳಿಗೆಗೆ ಶ್ರಮಿಸುವಂತೆ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಸ್.ಬಿ. ಶಂಕರ್ ಕರೆ ನೀಡಿದರು.

ಸುಂಟಿಕೊಪ್ಪ ಶ್ರೀ ರಾಮ ಸೇವಾ ಸಮಿತಿ ಹಾಗೂ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಸ್.ಬಿ. ಶಂಕರ್ ಸುಂಟಿಕೊಪ್ಪ ನಾಡು ಪ್ರೌಢಶಾಲೆಗೆ ರೂ. 35,000 ಮೌಲ್ಯದ ಧ್ವನಿವರ್ಧಕವನ್ನು ನೀಡಿ ಮಾತನಾಡಿದರು.

ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷೆ ಮೀನಾ ಸೋಮಯ್ಯ, ಕಾರ್ಯದರ್ಶಿ ಕೆ.ಎಸ್. ಮಂಜುನಾಥ್, ಸದಸ್ಯರಾದ ಬಿ.ಟಿ. ಪುರುಷೋತ್ತಮ್ ರೈ, ಕುಟ್ಟಪ್ಪ, ಸನ್ನಿ ಕಾರ್ಯಪ್ಪ, ಲಕ್ಷ್ಮೀನಾರಾಯಣ, ಶಾಲಾ ಮುಖ್ಯೋಪಾಧ್ಯಾಯಿನಿ ಕೆ.ಎಸ್. ಇಂದಿರಾ ಹಾಗೂ ಶಾಲಾ ಸಹ ಶಿಕ್ಷಕರು ಇದ್ದರು.ಸೋಮವಾರಪೇಟೆ: ತಾಲೂಕಿನ ಸೂರ್ಲಬ್ಬಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಚಿಣ್ಣರ ಹಬ್ಬ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಕ್ರೀಡೆಗಳು, ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಪ್ರೌಢಶಾಲಾ ಮಕ್ಕಳಿಗೆ ವಿಜ್ಞಾನ ಮತ್ತು ಸಾಮಾನ್ಯ ವಿಭಾಗದ ರಸಪ್ರಶ್ನೆ ಹಾಗೂ ಸ್ಮರಣ ಶಕ್ತಿ ಸ್ಪರ್ಧೆ, ಪ್ರಾಥಮಿಕ ಶಾಲಾ ಮಕ್ಕಳಿಗೆ ಸಾಂಸ್ಕøತಿಕ ನೃತ್ಯ, ಗೀತೆ ಗಾಯನ ಮತ್ತಿತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸರಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಇಂದಿನ ಮಕ್ಕಳು ನಾಳಿನ ಭಾರತವನ್ನು ನಿರ್ಮಿಸುತ್ತಾರೆ. ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸುವದು ಶಿಕ್ಷಕರ ಕರ್ತವ್ಯ. ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದರು.

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಂದರಿ ಮಾತನಾಡಿ, ಮಕ್ಕಳ ಮನಸ್ಸನ್ನು ಪ್ರೀತಿಯಿಂದ ಗೆದ್ದರೆ ಅವರಲ್ಲಿ ಸುಧಾರಣೆ ತರಲು ಸಾಧ್ಯ ಎಂದರು. ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಟಿ. ಪೂವಯ್ಯ, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ರವಿ ವಿಜೇತರಿಗೆ ಬಹುಮಾನ ವಿತರಿಸಿದರು. ಶಿಕ್ಷಕರಾದ ಕೆ. ಯಶೋಧ, ಕೆ.ಎ. ಅಮೀನ ಮತ್ತು ಶೋಭಾ ವಿವಿಧ ಸ್ಪರ್ಧೆಗಳನ್ನು ನಿರ್ವಹಿಸಿದರು.