ಶನಿವಾರಸಂತೆ, ನ. 21: ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ), ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಕಣ್ಣಿನ ಶಸ್ತ್ರ ಚಿಕಿತ್ಸೆ ಶಿಬಿರ ತಾ. 30 ರಂದು ಬೆಳಿಗ್ಗೆ 8.30 ರಿಂದ 1 ಗಂಟೆವರೆಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಚಿತ ಕನ್ನಡಕದ ವ್ಯವಸ್ಥೆಯೂ ಇರುತ್ತದೆ ಎಂದು ಕರವೇ ತಾಲೂಕು ಮತ್ತು ಹೋಬಳಿ ಘಟಕದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ-ಮೊ. 9449255831, ಕಾರ್ಯದರ್ಶಿ ರಾಮನಳ್ಳಿ ಪ್ರವೀಣ್-ಮೊ. 8105211939, ಹೋಬಳಿ ಘಟಕದ ಅಧ್ಯಕ್ಷ ಆನಂದ್-ಮೊ. 9632217607 ಸಂಪರ್ಕಿಸಬಹುದು.