ಮಡಿಕೇರಿ, ನ. 21: ಕೊಡಗು ಗೌಡ ನಿವೃತ್ತ ನೌಕರರ ಸಂಘದ 17ನೇ ವರ್ಷದ ವಾರ್ಷಿಕ ಮಹಾಸಭೆ ತಾ.25ರಂದು ಬೆಳಿಗ್ಗೆ 10.30 ಗಂಟೆಗೆ ಕೊಡಗು ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಅಮೆ ಸೀತಾರಾಂ ಭಾಗವಹಿಸಲಿದ್ದಾರೆ.

ಇದೇ ಸಂದರ್ಭ ನಿವೃತ್ತ ಕೃಷಿ ಅಧಿಕಾರಿ ಕೂಡಕಂಡಿ ಎ. ಗಣಪತಿ ಅವರನ್ನು ಸನ್ಮಾನಿಸಲಾಗುವದೆಂದು ಸಂಘದ ಕಾರ್ಯದರ್ಶಿ ಬೈತಡ್ಕ ಬೆಳ್ಯಪ್ಪ ತಿಳಿಸಿದ್ದಾರೆ.