ನಾಪೆÇೀಕ್ಲು: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಾಪೆÇೀಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ನೇಸರ ಪ್ರೌಢಶಾಲಾ ವಿಭಾಗದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಾಪೆÇೀಕ್ಲು: ಲಯನ್ಸ್ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವರ್ಷಂಪ್ರತಿ ನಡೆಸುವ 11 ರಿಂದ 13 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ನಾಪೆÇೀಕ್ಲು ಲಯನ್ಸ್ ಕ್ಲಬ್‍ನ ಆಶ್ರಯದಲ್ಲಿ ನಾಪೆÇೀಕ್ಲು ಅಂಕುರ್ ಪಬ್ಲಿಕ್ ಶಾಲೆಯಲ್ಲಿ ‘ಪೀಸ್ ಪೆÇೀಸ್ಟರ್ ಕಂಟೆಸ್ಟ್’ ಚಿತ್ರಕಲಾ ಸ್ಪರ್ಧೆ ನಡೆಸಲಾಯಿತು.

ಸ್ಪರ್ಧೆಯಲ್ಲಿ ಕಕ್ಕಬ್ಬೆ ಕೇಂದ್ರ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಪ್ರಥಮ್ ಎಂ.ಸಿ. ಪ್ರಥಮ, ಅಂಕುರ್ ಪಬ್ಲಿಕ್ ಶಾಲೆಯ ಇಂಪನ ದೇಚಮ್ಮ ದ್ವಿತೀಯ, ಬಲ್ಲಮಾವಟಿ ನೇತಾಜಿ ಆಂಗ್ಲ ಮಾಧ್ಯಮ ಶಾಲೆಯ ಬೋಪಯ್ಯ ಪಿ.ಎಂ. ತೃತೀಯ ಸ್ಥಾನ ಪಡೆದರು.

ಈ ಸಂದರ್ಭ ಕ್ಲಬ್‍ನ ಅಧ್ಯಕ್ಷ ಚೌರೀರ ಉದಯ, ಪದಾಧಿಕಾರಿಗಳಾದ ಮುಕ್ಕಾಟಿರ ವಿನಯ್, ಕನ್ನಂಬಿರ ಸುಧಿ ತಿಮ್ಮಯ್ಯ, ಬೊಳ್ಳಂಡ ಶ್ಯಾಮ್ ಬಿದ್ದಪ್ಪ, ಕೇಟೋಳಿರ ರತ್ನಾ ಚರ್ಮಣ್ಣ, ಮತ್ತಿತರರು ಇದ್ದರು.