ಸಿದ್ದಾಪುರ, ನ. 21: ಸಿದ್ದಾಪುರ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭ ಸಿದ್ದಾಪುರದ ಪಟ್ಟಣ ವ್ಯಾಪ್ತಿಯ ವಿವಿಧ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಸಿದ್ದಾಪುರ ಗ್ರಾಮ ಪಂಚಾಯಿತಿ ಪಿಡಿಒ ವಿಶ್ವನಾಥ್, ಸಿದ್ದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಕುಮಾರಿ, ಕರಡಿಗೋಡು ಶಾಲೆಯ ಶಿಕ್ಷಕಿ ರುಕ್ಮಿಣಿ ಸೇರಿದಂತೆ ಇತರ ಶಿಕ್ಷಕರು, ಗ್ರಾಮ ಪಂಚಾಯತ್ ಸದಸ್ಯರು ಹಾಜರಿದ್ದರು.