ಕೂಡಿಗೆ, ನ. 21: ಹೆಬ್ಬಾಲೆ ಶ್ರೀ ಬನಶಂಕರಿ ಅಮ್ಮನವರ ಜಾತ್ರೋತ್ಸವ ಅಂಗವಾಗಿ ಪೊಲೀಸ್ ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಕುಶಾಲನಗರ ಡಿವೈಎಸ್‍ಪಿ ಮುರುಳೀಧರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ವಿದ್ಯುತ್ ಅಲಂಕಾರ ಮಂಟಪಗಳ ಶೋಭಾಯಾತ್ರೆ ಸಾಗುವ ದಾರಿಯ ಬಗ್ಗೆ ಚರ್ಚೆ ಸೇರಿದಂತೆ ಶಾಂತಿಯುತವಾಗಿ ಹಬ್ಬ ಆಚರಣೆಗೆ ಸಹಕಾರ ನೀಡುವಂತೆ ಮನವಿ ಮಾಡಿದರು. ಸಭೆಯಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಬಸವರಾಜು. ವಿವಿಧ ಮಂಟಪ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕ್ರೀಡಾ ಸಮಿತಿ ಅಧ್ಯಕ್ಷರು ಸೇರಿದಂತೆ ಜಾತ್ರೋತ್ಸವ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಪ್ರಮುಖರು ಭಾಗವಹಿಸಿದ್ದರು.
ಈ ಸಂದರ್ಭ ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ಕುಮಾರ ಅರಾದ್ಯ, ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ನಂದೀಶ್ ಮತ್ತು ಗ್ರಾಮಸ್ಥರು ಹಾಜರಿದ್ದರು.