ಮಡಿಕೇರಿ, ನ. 21: ಮೈಸೂರು ಜಿಲ್ಲೆಯ ಹುಣಸೂರು ವಿಧಾನಸಭಾ ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿಯಾಗಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಎ.ಕೆ. ಹಾರಿಸ್ ಅವರನ್ನು ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ನೇಮಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವೈ. ಸಯ್ಯದ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.