ಮಡಿಕೇರಿ, ನ. 21: ಜಿಲ್ಲಾ ಕಾಂಗ್ರೆಸ್ ಮತ್ತು ರಾಜೀವ್ ಗಾಂಧಿ ಪಂಚಾಯತ್‍ರಾಜ್ ಸಂಘಟನೆ ವತಿಯಿಂದ ತಾ. 26ರಂದು ಸಂವಿಧಾನ ದಿನಾಚರಣೆ ಏರ್ಪಡಿಸಲಾಗಿದೆ.

ಮಡಿಕೇರಿ ಕೊಡವ ಸಮಾಜದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಎ.ಐ.ಸಿ.ಸಿ. ವಕ್ತಾರ ಹಾಗೂ ಸರ್ವೋಚ್ಚ ನ್ಯಾಯಾಲಯದ ವಕೀಲ ಪಾಲಚಂಡ ಬ್ರಿಜೇಶ್ ಕಾಳಪ್ಪ ಉದ್ಘಾಟನೆಯೊಂದಿಗೆ ವಿಚಾರ ಮಂಡಿಸಲಿದ್ದಾರೆ. ಎ.ಐ.ಸಿ.ಸಿ. ಕಾರ್ಯದರ್ಶಿ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಬಿ.ಎಂ. ಸಂದೀಪ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಎ. ರಂಗಸ್ವಾಮಿ, ವಿಧಾನಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಬೊಟ್ಟೊಳಂಡ ಮಿಟ್ಟು ಚಂಗಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರಾ ಮೈನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.