ಶ್ರೀಮಂಗಲ, ನ. 21: ದ.ಕೊಡಗಿನ ಕುಟ್ಟ ಗ್ರಾಮದಲ್ಲಿ ಹಾಡಹಗಲೇ ನಡೆದ ಕಾಡಾನೆ ದಾಳಿಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವಿಗೀಡಾಗಿರುವ ಘಟನೆ ನಡೆದಿದೆ.ಪಣಿಯ ಎರವರ ಕರಿಯ(60) ಸಾವಿಗೀಡಾದ ಕಾರ್ಮಿಕ. ಜಿಲ್ಲಾ ಪಂಚಾಯಿತಿ ಸದಸ್ಯ ಮುಕ್ಕಾಟಿರ ಶಿವುಮಾದಪ್ಪ ಅವರ ಸಹೋದರ ಕಿಶನ್‍ಕುಶಾಲಪ್ಪ ಅವರಿಗೆ ಸೇರಿದ (ಮೊದಲ ಪುಟದಿಂದ) ತೋಟದಲ್ಲಿ ಇತರೆ ಕಾರ್ಮಿಕ ರೊಂದಿಗೆ ಕೆಲಸ ಮಾಡುತಿದ್ದ ವೇಳೆ ಮಧ್ಯಾಹ್ನ 2.30 ಗಂಟೆಯ ಸಮಯದಲ್ಲಿ ದಿಢೀರಾಗಿ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಜೊತೆಯಲ್ಲಿದ್ದ ಇತರ ಕಾರ್ಮಿಕರು ಕಾಡಾನೆಯಿಂದ ತಪ್ಪಿಸಿಕೊಂಡಿದ್ದು, ಕರಿಯ ಕಾಡಾನೆ ದಾಳಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಕುಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕಾಡಾನೆ ದಾಳಿ ನಡೆದ ಸ್ಥಳಕ್ಕೆ ಮಡಿಕೇರಿ ವನ್ಯಜೀವಿ ವಿಭಾಗದ ಎಸಿಎಫ್ ದಯಾನಂದ್, ಶ್ರೀಮಂಗಲ ವಲಯ ಅರಣ್ಯಾಧಿಕಾರಿ ವಿರೇಂದ್ರಮರಿಬಸಣ್ಣವರ್, ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆÀಸಿದರು. ಸ್ಥಳದಲ್ಲಿ ಕುಟ್ಟ ವೃತ್ತ ನಿರೀಕ್ಷಕ ಪರಶಿವಮೂರ್ತಿ ಬಂದೋಬಸ್ತ್ ಕಲ್ಪಿಸಿದ್ದಾರೆ.

ರೈತರ ಪ್ರತಿಭಟನೆ

ಕಾಡಾನೆ ದಾಳಿಗೆ ಸಿಲುಕಿ ತೋಟ ಕಾರ್ಮಿಕ ಕರಿಯ ಸಾವನ್ನಪ್ಪಿದರೂ ಪೊಲೀಸರು ಮೊಕದ್ದಮೆ ನೊಂದಾಯಿಸುವಲ್ಲಿ ವಿಳಂಬ ಧೋರಣೆ ಅನುಸರಿಸು ತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ ಘಟಕದ ಪ್ರ.ಕಾರ್ಯದರ್ಶಿ ಸುಜಯ್ ಬೋಪಯ್ಯ ಹಾಗೂ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ ಮುಂದಾಳತ್ವದಲ್ಲಿ ಕುಟ್ಟ ಪೊಲೀಸ್ ಠಾಣೆಯ ಮುಂದೆ ರೈತರು ಪ್ರತಿಭಟನೆ ನಡೆಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಪೊಲೀಸರಿಗೆ ದೂರು ನೀಡುವಲ್ಲಿ ಸಮಯ ವ್ಯರ್ಥ ಮಾಡುತ್ತಿದ್ದಾರೆ, ಆನೆ ಹಾವಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆಯ ಅಧಿಕಾರಿಗಳು ವಿಫಲವಾಗುತ್ತಿದ್ದಾರೆ. ದ.ಕೊಡಗಿನ ವಿವಿಧ ಭಾಗದಲ್ಲಿ ಆಗಿಂದಾಗ್ಗೆ ಇಂತಹ ಘಟನೆಗಳು ಪುನಾರವರ್ತ ನೆಯಾಗುತ್ತಿದೆ. ಕೂಡಲೇ ಆನೆಗಳನ್ನು ಕಾಡಿಗೆ ಅಟ್ಟುವಂತೆ ಪ್ರತಿಭಟ ನಾಕಾರರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದರು.

ಮೃತಪಟ್ಟ ಕುಟುಂಬಕ್ಕೆ ತಕ್ಷಣವೇ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ದೂರು ದಾಖಲಾಗದೇ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ನೀಡುವದಿಲ್ಲ ಎಂದು ಪಟ್ಟುಹಿಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಕುಟ್ಟ ಆಸ್ಪತ್ರೆಯ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡು ನಂತರ ಪೋಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

ಕುಟ್ಟ ವೃತ್ತನಿರೀಕ್ಷಕ ಪರಶಿವ ಮೂರ್ತಿ ರೈತರನ್ನು ಮನವೊಲಿಸುವ ಪ್ರಯತ್ನ ನಡೆಸಿದರಾದರೂ ರೈತರು ಬಿಗಿ ಪಟ್ಟು ಸಡಿಸಲಿಲ್ಲ.

ತಾಲೂಕು ಸಂಚಾಲಕ ಬಾಚಮಾಡ ಭವಿಕುಮಾರ್, ಶ್ರೀಮಂಗಲ ಸಂಚಾಲಕ ಚಟ್ಟಂಗಡ ಕಂಬ ಕಾರ್ಯಪ್ಪ,ಪೊನ್ನಂಪೇಟೆ ಹೋಬಳಿ ಸಂಚಾಲಕ ಆಲೆಮಾಡ ಮಂಜುನಾಥ್, ಹುದಿಕೇರಿ ಸಂಚಾಲಕ ಚಂಗುಲಂಡ ಸೂರಜ್, ಪುಚ್ಚಿಮಾಡ ಸಂತೋಷ್, ತಿತರಮಾಡ ರಾಜ, ಸುನಿಲ್, ಸೇರಿದಂತೆ ಅನೇಕ ರೈತ ಮುಖಂಡರು ಸ್ಥಳದಲ್ಲಿ ಜಮಾವಣೆ ಗೊಂಡು ಪ್ರತಿಭಟನೆ ನಡೆಸಿದರು. ತಡರಾತ್ರಿಯವರೆÀಗೂ ರೈತರು ಪ್ರತಿಭಟನೆ ಮುಂದುವರೆಸಿದರು. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು.

-ಹೆಚ್.ಕೆ.ಜಗದೀಶ್