ಸೋಮವಾರಪೇಟೆ, ನ. 21: ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ತಾ.25ರಂದು 10.30ಕ್ಕೆ ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಕಲಚೇತನರಿಗೆ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ತಾಲೂಕಿನ ವಿಕಲಚೇತನರು ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದ್ದು, ಭಾಗವಹಿಸುವವರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಯನ್ನು ತರಬೇಕು. ಹೆಚ್ಚಿನ ಮಾಹಿತಿಗಾಗಿ ದೂ: 08276 282281 ಸಂಖ್ಯೆಯನ್ನು ಸಂಪರ್ಕಿಸಬಹುದು.